ಚಿತ್ರದುರ್ಗ: ಕಳೆದ ೨ ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿದ್ದ ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು ದಂಪತಿಗಳು ಸಾವನ್ನಪ್ಪಿದ್ದಾರೆ.
ಹಿರಿಯೂರು ತಾಲೂಕಿನ ಕಾರೋಬನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಚನ್ನಕೇಶವ (೨೬) ಹಾಗೂ ಸೌಮ್ಯ (೨೧) ಮೃತ ದುರ್ದೈವಿಗಳು
ಇನ್ನೂ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ಮಳೆ ಆಗುತ್ತಿದೆ. ಇದರಿಂದ ಗೋಡೆ ತೇವಗೊಂಡಿದ್ದು, ಮನೆಯ ಗೋಡೆ ಕುಸಿತಗೊಂಡಿದೆ. ಇದು ಪಕ್ಕದ ಗುಡಿಸಲಿನ ಮೇಲೆ ಬಿದ್ದ ಪರಿಣಾಮ ಅದರಲ್ಲಿ ವಾಸವಾಗಿದ್ದ ಚನ್ನಕೇಶವ ಹಾಗೂ ಸೌಮ್ಯ ದಂಪತಿಗಳು ಸಾವನ್ನಪ್ಪಿದ್ದಾರೆ.
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.