ಕೂಗು ನಿಮ್ಮದು ಧ್ವನಿ ನಮ್ಮದು

ಕುಸಿದು ಬಿದ್ದ ಮನೆ ಗೋಡೆ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಕುಟುಂಬ

ಶಿವಮೊಗ್ಗ: ಸತತವಾಗಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಅಕಾಲಿಕ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಈ ಘಟನೆಯು ಕೂಡಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ಸಂಭವಿಸಿದೆ. ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆಯೇ ಕುಸಿದು ಬಿದ್ದಿದೆ. ಬೆಳ್ಳಿಗ್ಗೆ ನಿದ್ರೆಯಲ್ಲಿದ್ದ ಕುಟುಂಬದ ಸದಸ್ಯರು ಈ ವೇಳೆ ಮಣೆ ಗೋಡೆ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಮನೆ ಬಿದ್ದು ಕುಟುಂಬಸ್ಥರು ಅತಂತ್ರರಾಗಿದ್ರು ಸ್ಥಳಕ್ಕೆ ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳಾಗಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಆಗಲಿ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿಲ್ಲ. ಜೊತೆಗೆ ಸಂತ್ರಸ್ಥ ಕುಟುಂಬಕ್ಕೆ ಗ್ರಾಮದ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸಂತ್ರಸ್ಥ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

error: Content is protected !!