ಕೂಗು ನಿಮ್ಮದು ಧ್ವನಿ ನಮ್ಮದು

ಪ್ರಮಾಣ ವಚನ ಸ್ವೀಕಾರ ಮಾಡಿದ ರಮೇಶ್ ಭೂಸನೂರು

ಬೆಂಗಳೂರು: ಸಿಂಧಗಿ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಭೂಸನೂರು ರಮೇಶ್ ಬಾಳಪ್ಪ ಅವರು ಶಾಸಕರಾಗಿ ಇವತ್ತು ಪ್ರಮಾಣ ವಚನ ಸ್ವೀಕರಿಸಿದ್ರು. ಭೂಸನೂರು ರಮೇಶ್ ಬಾಳಪ್ಪ ಶಾಸಕರಾಗಿ ಭಗವಂತನ ಹೆಸರಿನಲ್ಲಿ ಇವತ್ತು ಪ್ರಮಾಣ ವಚನ ಸ್ವೀಕರಿಸಿದ್ರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಮಾಣವಚನ ಬೋಧಿಸಿದ್ರು.

ಇನ್ನೂ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ರು.
೧೫ನೇ ವಿಧಾನಸಭೆಗೆ ಅಕ್ಟೋಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಸಿಂಧಗಿ ವಿಧಾನಸಭಾ ಕ್ಷೇತ್ರದಿಂದ ರಮೇಶ್ ಭೂಸನೂರು ಮೂವತ್ತು ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ರು.

error: Content is protected !!