ಕೂಗು ನಿಮ್ಮದು ಧ್ವನಿ ನಮ್ಮದು

ಮುಂಬೈನಿಂದ ಕ್ಷೇತ್ರಕ್ಕೆ ಬಂದ ಸಾಹುಕಾರ್ ಅವರಿಂದ ತಾಲೂಕು ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ

ಬೆಳಗಾವಿ: ಬುಧವಾರ ರಾತ್ರಿ ಮುಂಬೈಯಿಂದ ಗೋಕಾಕ್ ನಗರಕ್ಕೆ ಆಗಿಮಿಸಿದ ಸಾಹುಕಾರ್ ರಮೇಶ್ ಜಾರಕಿಹೊಳಿ ಇಂದು ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ ಮಾಡಿದರು. ಇನ್ನು ವಿವಿಧ ಸರ್ಕಾರಿ ಯೋಜನೆಗಳಿಗೆ ಚಾಲನೆ ನೀಡಿದ ಅವರು ಗೃಹಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾ‌ಬ್‌ ವಿತರಣೆ ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿದರು. ಆದರೆ ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಶನಿವಾರ ಎಲ್ಲವನ್ನೂ ಹೇಳುತ್ತೇನೆ ಎಂದು ಸಾಹುಕಾರ್ ಅವರ ಆಪ್ತರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ. ಇಂದು ಗೋಕಾಕ್ ನಿಂದ ಬೆಂಗಳೂರಿಗೆ ತೆರಳುತ್ತಿರುವ ಅವರು ಸಿಎಂ ಅವರನ್ನು ಬೇಟಿಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ. ಒಟ್ಟಾರೆ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಂಬೈದಿಂದ ಕ್ಷೇತ್ರಕ್ಕೆ ಬಂದು ಬೇಟಿ ನೀಡಿ ಬೆಂಗಳೂರಿಗೆ ಪ್ರಯಾಣ ಮಾಡಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

error: Content is protected !!