ಕೂಗು ನಿಮ್ಮದು ಧ್ವನಿ ನಮ್ಮದು

ರಮೇಶ್ ಕತ್ತಿ ಮುಡಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ: ಒಮ್ಮತದಿಂದ ಅವಿರೋಧ ಆಯ್ಕೆ ಮಾಡಿದ ಬಿಜೆಪಿ ನಾಯಕರು

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯ ಕ್ಲೈಮ್ಯಾಕ್ಸ್ ಕೊನೆಗೂ ಅಂತ್ಯಗೊಂಡಿದೆ. ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ರಮೇಶ್ ಕತ್ತಿ ಪುನರಾಯ್ಕೆ ಆಗಿದ್ದಾರೆ. ಈ ವಿಚಾರವಾಗಿ ಸ್ಪಷ್ಟಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌, ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ‌, ಸವದಿ ‌ಹಾಗೂ ಕತ್ತಿ ಒಗ್ಗಟ್ಟಿನ ಕೆಲಸ ಮಾಡುತ್ತೇವೆ. ಜಿಲ್ಲೆ, ರಾಜ್ಯಕ್ಕೆ ಬೆಳಗಾವಿಯಿಂದ ಉತ್ತಮ ಸಂದೇಶ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ರಾಜಕೀಯ ಮಾಡಲು ಯತ್ನ ಮಾಡೋದಾಗಿ ಹೇಳಿದರು.

ಫೈನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ ಕತ್ತಿ, ಉಪಾಧ್ಯಕ್ಷರಾಗಿ ಸುಭಾಷ ಡವಳೇಶ್ವರ ಆಯ್ಕೆಯಾಗಿದ್ದಾರೆ. ಇದೇ ವೇಳೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯದಲ್ಲಿ ಬೆಳಗಾವಿ ಡಿಸಿಸಿ ಪ್ರತಿಷ್ಠಿತ ಬ್ಯಾಂಕ್ ಆಗಿದೆ. ನಮ್ಮ ಪಕ್ಷದ ವರಿಷ್ಠರು ಬ್ಯಾಂಕಿನ ಶತಮಾನೋತ್ಸವ ಇರುವ ಹಿನ್ನೆಲೆ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ 13 ಜನ ನಿರ್ದೇಶಕರ ಅವಿರೋಧ ಆಯ್ಕೆ ಮಾಡಲಾಯಿತು. ಈಗ ಸರ್ವಾನುಮತದಿಂದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಕೂಡ ನಡೆದಿದೆ ಎಂದರು. ರಾಜಕೀಯದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯ ಸಹಜ. ಎಲ್ಲರ ಮನಸ್ಸು ಗೆದ್ದು ಈ ಆಯ್ಕೆ ಮಾಡಲಾಗಿದೆ ಎಂದ ಸವದಿ, ಮುಂದಿನ ತಿಂಗಳು ಅಫೆಕ್ಸ್ ಬ್ಯಾಂಕ್ ಗೆ ಯಾರು ಹೋಗಬೇಕು ಎನ್ನುವ ಬಗ್ಗೆ ತೀರ್ಮಾ‌ನ ಮಾಡಲಾಗುವುದು. ಪಕ್ಷ, ಸಂಘದ ಸೂಚನೆಯಂತೆ ಅವಿರೋಧ ಆಯ್ಕೆ ಮಾಡಲಾಗಿದೆ ಎಂದರು.

error: Content is protected !!