ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡ್ತಾರೆ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:ನಾಳೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಾಳೆ ಸಿಎಂ ‘ಶಕ್ತಿ ಯೋಜನೆ ಉದ್ಘಾಟನೆ ಮಾಡುತ್ತಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗುತ್ತೇವೆ. ಬೇರೆ ಪ್ರದೇಶಗಳಿಗೆ ಹೋಗುವ ಮಹಿಳೆಯರು ಬಸ್ನಲ್ಲಿ ಕುಳಿತಿರುತ್ತಾರೆ. ಆ ಬಸ್ಗೆ ಸಿಎಂ ಹಸಿರು ನಿಶಾನೆ ತೋರಿಸಿ ಚಾಲನೆ ಕೊಡುತ್ತಾರೆ.

ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದರು. ಇನ್ನು ಎಲ್ಲರೂ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು, ಯಾವ ಬಸ್ ನಲ್ಲಿ ಅವಕಾಶ ಅಂತಾ ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ಕೊಟ್ಟಿದ್ದೇವೆ ಎಂದಿದ್ದಾರೆ

error: Content is protected !!