ಕೂಗು ನಿಮ್ಮದು ಧ್ವನಿ ನಮ್ಮದು

ನಾರಾಯಣಗೌಡರ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ನಾರಾಯಣಗೌಡಗೆ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ನಾರಾಯಣಗೌಡರನ್ನು ಜೆಡಿಎಸ್ ಪಕ್ಷ ಶಾಸಕರನ್ನಾಗಿ ಮಾಡಿತ್ತು. ಆದ್ರೆ ದೇವೇಗೌಡರು, ಹೆಚ್ಡಿಕೆಗೆ ಅನ್ಯಾಯ ಮಾಡಿ ಹೋದರು. ನೀವು ಪಕ್ಷ ಬಿಟ್ಟಿದ್ದು ಯಾಕೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದು ನಾರಾಯಣಗೌಡ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

JDSಗೆ ಕೈಕೊಟ್ಟು ರಮೇಶ್ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರಿದ್ದಾರೆ. ಕಳೆದ ಬಾರಿ ನಿಖಿಲ್ಗೆ ಬೆಂಬಲಿಸಿ ಎಂದು ನಿಮ್ಮ ಪಕ್ಷದವರೇ ಹೇಳಿದ್ರು. ಆದ್ರೆ ನಿಮ್ಮ ಪಕ್ಷಕ್ಕೂ ನಿಷ್ಠೆಯಾಗಿರದೆ ಸುಮಲತಾರನ್ನು ಬೆಂಬಲಿಸಿದ್ರಿ. ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಮೇಶ್ ಬಂಡಿಸಿದ್ದೇಗೌಡ ವಿರುದ್ಧವೂ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ.

error: Content is protected !!