ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್ ಕಲೆಹಾಕಿತು. 224 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 60 ರನ್ಗಳಿಂದ ಭರ್ಜರಿ ಜಯ ಸಾಧಿಸಿತು