ಕೂಗು ನಿಮ್ಮದು ಧ್ವನಿ ನಮ್ಮದು

ಖ್ಯಾತ ಪತ್ರಕರ್ತ, ರಿಪಬ್ಲಿಕ್ ಟಿವಿ ಚಾನಲ್ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮುಂಬಯಿ ಪೊಲೀಸ್ ವಶಕ್ಕೆ

ಮುಂಬಯಿ: ಹಿರಿಯ ಪತ್ರಕರ್ತ, ರಿಪಬ್ಲಿಕ್ ಟಿವಿ ಚಾನಲ್ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಅರ್ನಬ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಮುಂಬಯಿ ಪೊಲೀಸರು ಅರ್ನಬ್ ಅವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದೇ ವೇಳೆ ಅರ್ನಬ್ ಗೋಸ್ವಾಮಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಅವರದ್ದೇ ರಿಪಬ್ಲಿಕ್ ಟಿವಿ ವರದಿ ಮಾಡಿದೆ. ಟಿ.ಆರ್.ಪಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈಗಾಗಲೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮರಾಠಿ ಚಾನೆಲ್ ಸಂಪಾದಕರನ್ನು ಕೂಡ ಮುಂಬಯಿ ಪೊಲೀಸರು ಬಂಧಿಸಿದ್ದರು. ಆದರೆ ಅರ್ನಬ್ ಗೋಸ್ವಾಮಿ ಟಿಆರ್ ಪಿ ಹಗರಣವನ್ನು ಸ್ಪಷ್ಟವಾಗಿ ನಿರಾಕರಿಸಿ, ಈ ಸಂಬಂಧ ದಾಖಲೆಗಳನ್ನೂ ಸಲ್ಲಿಸಿದ್ದರು. ಅಲ್ಲದೇ ಮುಂಬಯಿ ಪೊಲೀಸರು ಅನಗತ್ಯವಾಗಿ ಅಲ್ಲಿನ ಸರಕಾರದ ಕುಮ್ಮಕ್ಕಿನಿಂದ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

error: Content is protected !!