ಕೂಗು ನಿಮ್ಮದು ಧ್ವನಿ ನಮ್ಮದು

ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ಇಂದು ಪ್ರತಿಭಟನೆ

ಮಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿ ಎಂದು ಕಾಂಗ್ರೆಸ್ ಖಂಡಿಸಿ, ಇಂದು ಬೆಳಗ್ಗೆ 11 ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸುವ ಸಾದ್ಯತೆಯಿದೆ.

error: Content is protected !!