ಉಡುಪಿ: RSS ಸಂಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ೧ ವರ್ಗದ ವೋಟ್ ಬ್ಯಾಂಕಿಗೆ ಅವರಿಬ್ಬರು ಜೊಲ್ಲು ಸುರಿಸುತ್ತಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ರು. ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರಗ ಜ್ಞಾನೇಂದ್ರ, RSS ಇವರು ವಿರೋಧಿಸುವಂತದ್ದು ಏನು ಮಾಡಿದೆ ಹೇಳಿ? ಎಂದು ಪ್ರಶ್ನಿಸಿದ್ದಾರೆ. RSS ಬಗ್ಗೆ ನಾನು ಹಿಟ್ ಆ್ಯಂಡ್ ರನ್ ಹೇಳಿಕೆ ನೀಡಲ್ಲ. ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದಿರುವ ಕುಮಾರಸ್ವಾಮಿಗೆ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ರು.
ನಾನು RSS, ರಾಷ್ಟ್ರಪತಿ, ಉಪರಾಷ್ಟ್ರಪತಿಗಳು RSS ಪ್ರಧಾನಿ ನರೇಂದ್ರ ಮೋದಿ RSS ನಿಂದ ಬಂದವರು. ನಾವು ನಿಮಗೆ ಏನು ತೊಂದರೆ ಮಾಡಿದ್ದೇವೆ ಹೇಳಿ? RSS ದೇಶಭಕ್ತಿ ಹೇಳಿಕೊಡುವ ದೊಡ್ಡ ಸಂಘಟನೆ. ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ರು. ವೋಟ್ ಕಿತ್ತುಕೊಳ್ಳಲು ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಕಾಂಪಿಟೇಷನ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ RSS ಬಗ್ಗೆ ಸುದ್ದಿಗೋಷ್ಠಿ ಮಾಡಲಿ. ಎಲ್ಲವೂ ಚರ್ಚೆಯಾಗಲಿ. RSS ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತು. ಏನು ಜಗಜ್ಜಾಹೀರು ಮಾಡುತ್ತಾರೆ ನೋಡೋಣ ಎಂದು ಹೆಚ್.ಡಿ.ಕುಮಾರಸ್ವಾಮಿಗೆ ಆರಗ ಸವಾಲು ಹಾಕಿದ್ರು.