ಇಂದು ರಾಹುಕಾಲದಲ್ಲಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಹಾಗೂ ಮೌಢ್ಯಕ್ಕೆ ಸೆಡ್ಡು ಹೊಡೆಯಲು ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಇಂದು ರಾಹುಕಾಲದಲ್ಲಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಯಮಕನಮರಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 3 ಗಂಟೆಯವರೆಗಿನ ರಾಹುಕಾಲದಲ್ಲಿ ಸರಳವಾಗಿ ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಿದ್ದಾರೆ.