ಕೂಗು ನಿಮ್ಮದು ಧ್ವನಿ ನಮ್ಮದು

ಇನ್ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ

ಬೆಂಗಳೂರು: ಖಾಸಗಿ ಶಾಲೆಗಳಂತೆ ಇನ್ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಈಗಾಗಲೇ ಅನುಮತಿ ನೀಡಿರುವ ಸರ್ಕಾರ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

error: Content is protected !!