ಚಿಕ್ಕೋಡಿ: ಹೆದರಿಕೆ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಮತ್ತು ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇವತ್ತಿನಿಂದ ಎಲ್ಲಾ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದೆ. ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇವತ್ತಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಉಮೇಶ್ ಕತ್ತಿ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದ್ರು.
ಕೋವಿಡ್ ಕುರಿತು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಮೇಶ್ ಕತ್ತಿ ಹೇಳಿದರು. ಕಳೆದ ೨ ವರ್ಷಗಳಿಂದ ವಿದ್ಯಾಭ್ಯಾಸ ಇಲ್ಲದೇ ಸಾಕಷ್ಟು ವಿದ್ಯಾರ್ಥಿಗಳು ಕಷ್ಟಪಡುವಂತಾಗಿದೆ. ಹಾಗಾಗಿ ಸರ್ಕಾರ ಇವತ್ತಿನಿಂದ ಶಾಲೆಗಳನ್ನು ಆರಂಭ ಮಾಡಿದ್ದು ಶಾಲೆಗೆ ಬಂದು ವಿದ್ಯಾರ್ಥಿಗಳು ಜ್ಞಾನ ಪಡೆಯುವಂತೆ ಉಮೇಶ್ ಕತ್ತಿ ಮನವಿ ಮಾಡಿಕೊಂಡ್ರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು, S.D.M.C ಸದಸ್ಯರು ಉಪಸ್ಥಿತರಿದ್ದರು.