ಕೂಗು ನಿಮ್ಮದು ಧ್ವನಿ ನಮ್ಮದು

ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲಿದೆ: ಸಚಿವೆ ಶಶಿಕಲಾ ಅ ಜೊಲ್ಲೆ

ನಿಪ್ಪಾಣಿ: ಕಳೆದ ಎರಡು ಬಾರಿಯ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದು, ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆಶೀರ್ವಾದ ಸದಾ ನನ್ನ ಮೇಲಿದೆ ಎಂದು ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾನ್ಯ ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.

ಇಂದು ಕ್ಷೇತ್ರದ ಜತ್ರಾಟ, ಶಿರ್ಪೆವಾಡಿ, ಲಖನಾಪುರ, ಮಮದಾಪುರ, ಸಿದ್ನಾಳ ಮತ್ತು ಹುನ್ನರಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ.

ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಈ ಎಲ್ಲಾ ಕಾರ್ಯಗಳ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಬಿಜೆಪಿ ಪ್ರಮುಖರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಅವರಿಗೆ ಸಾಥ್‌ ನೀಡಿದರು.

ನಿಪ್ಪಾಣಿ ನಗರದ ನ್ಯೂ ಏಕತಾ ತರುಣ್ ಮಂಡಳ ಸದಸ್ಯರು ಬಿಜೆಪಿಗೆ ಸೇರ್ಪಡೆ

ನಮ್ಮ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ನಿಪ್ಪಾಣಿ ಮತಕ್ಷೇತ್ರದ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ನಗರದ ಜತ್ರಾಟ ವೇಸ್ ನ್ಯೂ ಏಕತಾ ತರುಣ ಮಂಡಳದ ಅಧ್ಯಕ್ಷರಾದ ಶ್ರೀ ಅಕ್ಷಯ ದಾಬಾಡೆ ಉಪಾಧ್ಯಕ್ಷರಾದ ಶ್ರೀ ಅನಮೋಲ ವರುಟೆ ಅವರ ಮುಂದಾಳತ್ವದಲ್ಲಿ ಅವರು ನೂರಾರು ಸದಸ್ಯರು ಕಾಂಗ್ರೆಸ್ ಪಕ್ಷ‌ ತೊರೆದು, ಬಿಜೆಪಿಗೆ ಸೇರ್ಪಡೆಗೊಂಡರು. ಅವರನ್ನು ಸಚಿವೆ ಶಶಿಕಲಾ ಜೊಲ್ಲೆಯವರು ಆತ್ಮೀಯವಾಗಿ ನಮ್ಮ ಪಕ್ಷಕ್ಕೆ ಬರಮಾಡಿಕೊಂಡರು.

error: Content is protected !!