ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ಕುಮಾರ್ ನಿವಾಸಕ್ಕೆ ಸುರ್ಜೇವಾಲ ಭೇಟಿ ನೀಡಿದ್ದಾರೆ. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ ಬೇಸರ ವ್ಯಕ್ತಪಡಿಸಿದ್ದರು.
ಬೇಸರಗೊಂಡಿದ್ದ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಪಕ್ಷಕ್ಕೆ ಪ್ರಚಾರ ಸಮಯದಲ್ಲಿ ಕೈಗೂಡಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.