ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಕ್ರಿಮಿನಲ್ ಗಳ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ಮತ್ತು ರಾಷ್ಟ್ರವಿರೋಧಿಗಳ ಜೊತೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರು ಗೋಹತ್ಯೆ ನಿಷೇಧ ಕಾನೂನನ್ನು ವಾಪಸ್ಸು ಪಡೆಯುವುದಾಗಿ ಹೇಳುತ್ತಾರೆ.
5-6 ವರ್ಷಗಳ ಹಿಂದೆ ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಹೇಳಿದ ಶೋಭಾ ಫೋಟೋಗಳನ್ನು ಮಾಧ್ಯಮದವರಿಗೆ ತೋರಿಸಿದರು