ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿ ಹೋದ? ಈಗ ಅವನನ್ನು ಒದ್ದು ಕಳಿಸಿದ್ದಾರೆ. ಆತ ಈಗ ಪತ್ತೆ ಇಲ್ಲ, ಅವನು ಈಗ ದನ ಮೇಯಿಸೋಕೆ ಹೋದ್ನಾ? ಎಮ್ಮೆ ಮೇಯಿಸೋಕೆ ಹೋದನಾ ಗೊತ್ತಿಲ್ಲ ಎಂದು ಕಳಲೆ ಕೇಶವಮೂರ್ತಿ ವಿರುದ್ಧ ಸಂಸದ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಆತನ ಜಾಗಕ್ಕೆ ಬರಲು ಧ್ರುವನಾರಾಯಣ್, ಮಹದೇವಪ್ಪ ಕಚ್ಚಾಡ್ತಿದ್ದಾರೆ. ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು? ನನ್ನ ವಿರುದ್ಧ ಆಟ ಆಡಿದರಲ್ಲಿ ಒಬ್ಬ ಟಿ.ನರಸೀಪುರದಲ್ಲಿ ಅವಿತುಕೊಂಡ. ಸಿದ್ದರಾಮಯ್ಯ ಪಂಚೆ ಎತ್ತಿಕೊಂಡು ಕೋಲಾರ ಕ್ಷೇತ್ರಕ್ಕೆ ಹೋದರು ಎಂದು ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂಸದ ಶ್ರೀನಿವಾಸಪ್ರಸಾದ್ ಕಿಡಿಕಾರಿದ್ದಾರೆ