ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ಸದ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪೃಶ್ಯ ಅಂತಾ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಮುಖ್ಯಮಂತ್ರಿ ಆಗಿದ್ದವರು, ಇಂದು ವಿಪಕ್ಷ ನಾಯಕರಾಗಿರುವವರು. ಈ ತಿಂಗಳ 7ರಂದು ನಾರಾಯಣಸ್ವಾಮಿ ಅವರೇ, ನೀವು ಸದಾ ಅಸ್ಪೃಶ್ಯರು ಅಂತಾ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರವಿರಲಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನನ್ನ ನಿಂದಿಸುವ ಭರದಲ್ಲಿ ನನ್ನ ಜಾತಿಯನ್ನ ನಿಂದಿಸಿದ್ದಾರೆ. ಈ ವಿಚಾರ ದೌರ್ಜನ್ಯ ತಡೆ ಕಾಯ್ದೆಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಕೇಸ್ ದಾಖಲಿಸಿದ್ದೇನೆ, ಅವರನ್ನ ಅರೆಸ್ಟ್ ಮಾಡಬೇಕಾಗುತ್ತದೆ. ಇದರಲ್ಲಿ ಯಾವುದೇ ರೀತಿಯ ತಡ ಮಾಡಿದ್ರೆ ನಾನು ಧರಣಿ ಮಾಡ್ತೇನೆ ಎಂದು ತಿಳಿಸಿದ್ದಾರೆ.