ಬೆಂಗಳೂರು : 2023 ರ ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೊದಲ ಪಟ್ಟಿಯಲ್ಲಿ ಒಟ್ಟು 124 ಅಭ್ಯರ್ಥಿಗಳ ಹೆಸರನ್ನುಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವರುಣಾ ಮತ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿತ್ತಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಹೆಸರಿಲ್ಲ. ಸಿದ್ದರಾಮಯ್ಯ 2 ಕ್ಷೇತ್ರ ಸ್ಪರ್ಧೆ ಸುಳಿವು ಬೆನ್ನಲ್ಲೇ ಮೊದಲ ಪಟ್ಟಿಯಲ್ಲಿ ಕೋಲಾರ, ಬಾದಾಮಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿರದಿರುವುದು ಕುತೂಹಲ ಮೂಡಿಸಿದೆ.
ಹಾಗೆ, ದೇವನಹಳ್ಳಿ ಕ್ಷೇತ್ರದಿಂದ ಕೆ ಎಚ್ ಮುನಿಯಪ್ಪ ಸ್ಪರ್ಧಿಸಲಿದ್ದಾರೆ. ಅಲ್ಲದೆ, ರಾಜಾಜಿನಗರದಿಂದ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ, ಕನಕಪುರ ಮತ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಟಿಕೆಟ್ ಘೋಷಿಸಲಾಗಿದ್ದು, ದರ್ಶನ್ ಧ್ರುವನಾರಾಯಣಗೆ ನಂಜನಗೂಡು ಕ್ಷೇತ್ರದಿಂದ. ಇನ್ನು, ರಾಜಕೀಯ ನಿವೃತ್ತಿ ಘೋಷಿಸಿದ್ದ ತನ್ವೀರ್ ಸೇಠ್ಗೆ ಮತ್ತೆ ಟಿಕೆಟ್ ಘೋಷಿಸಿರುವುದು ಅಚ್ಚರಿ ಮೂಡಿಸಿದೆ.