ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.