ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆ.
ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು ಬಂದಿದ್ದರು. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಕರ್ನಾಟಕದ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.