ಕೂಗು ನಿಮ್ಮದು ಧ್ವನಿ ನಮ್ಮದು

ಕೊನೆಗೂ ಮಾಜಿ ಸಿಎಂ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.

error: Content is protected !!