ಬೆಂಗಳೂರು: ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ಭಾಗಿಯಾಗಬೇಕು.
5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಗ್ಯಾರಂಟಿಗಳ ಟೀಕೆಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.