ನವದೆಹಲಿ: ತುರ್ತು ಬುಲಾವ್ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರಿದ್ದು, ಸದ್ಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಅಂತ್ಯವಾಗಿದೆ. ದೆಹಲಿಯ ಜನಪಥ್ ರಸ್ತೆ ಅಲ್ಲಿರುವ ನಿವಾಸದಲ್ಲಿ ಭೇಟಿಯಾದ
ಜಮೀರ್ ಅಹ್ಮದ್ ಸಾಥ್ ನೀಡಿದ್ರು. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸುಮಾರು ಮೂವತ್ತು ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಈ ವೇಳೆ ಸೋನಿಯಾ ಗಾಂಧಿ ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ, ಪದಾಧಿಕಾರಿಗಳ ನೇಮಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಸೋನಿಯಾ ಗಾಂಧಿ ಮತ್ತು ಸಿದ್ದ ರಾಮಯ್ಯ ಚರ್ಚೆ ನಡೆಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಸೋನಿಯಾ ಗಾಂಧಿ ಕೇಳಿದ್ದಾರೆ.
AICC ಪುನರ್ ರಚನೆ ಬಗ್ಗೆಯೂ ಸಲಹೆ ಪಡೆದಿದ್ದಾರೆ ಎನ್ನಲಾಗಿದ್ದು, ಸೋನಿಯಾ ಗಾಂಧಿ ಭೇಟಿಗೂ ಮುಂಚಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರ ಜೊತೆಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನನ್ನನ್ನು ಸೋನಿಯಾ ಗಾಂಧಿಯವರು ಯಾವ ಕಾರಣಕ್ಕೆ ಕರೆದಿದ್ದಾರೆ ಗೊತ್ತಿಲ್ಲ. ನಾನು ಅವರನ್ನು ಭೇಟಿ ಮಾಡಿದ ನಂತರ ಗೊತ್ತಾಗುತ್ತೆ. ನಾನು ರಾಷ್ಟ್ರ ರಾಜಕೀಯಕ್ಕೆ ಹೋಗುವುದಿಲ್ಲ. ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ರು.