ಕೂಗು ನಿಮ್ಮದು ಧ್ವನಿ ನಮ್ಮದು

ಆರ್.ಎಸ್.ಎಸ್ ಅನ್ನೋದು ಕೋಮುವಾದಿ ಸಂಘಟನೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಆರ್.ಎಸ್.ಎಸ್ ಅನ್ನೋದು ಕೋಮುವಾದಿ ಸಂಘಟನೆಯಾಗಿದೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದು ಮತ್ತು ಹಿಂದೂಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವುದಂತದ್ದು ಆರ್.ಎಸ್.ಎಸ್ ಎಂದು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮುಂದುವರಿಸಿದ್ದಾರೆ. ನಗರದಲ್ಲಿ ಮಾದ್ಯಮದವರ ಜೊತೆಗೆ ಮಾತನಾಡುತ್ತಾ ಆರ್.ಎಸ್.ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಅವರು ಪ್ರತಿಕ್ರಿಯಸಿದ್ರು.

ನಮ್ಮ ಸಮಾಜದಲ್ಲಿ ಅಶಾಂತಿ ಅನ್ನು ನಿರ್ಮಾಣ ಮಾಡುವ ಕೆಲಸವನ್ನ ಮೊದಲಿನಿಂದಲೂ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅದರಲ್ಲಿ ಯಾವುದೇ ನಂಬಿಕೆ ಇಟ್ಟುಕೊಂಡಿಲ್ಲ. ಎಲ್ಲ ಧರ್ಮದವರನ್ನ ನಾವು ಗೌರವಿಸುತ್ತೇವೆ. ಆರ್.ಎಸ್.ಎಸ್ನ ಮುಖವಾಡವೇ BJP ಇನ್ನೂ ಆರ್.ಎಸ್.ಎಸ್ ನವರು ಏನು ನಿರ್ದೇಶನ ಕೊಡ್ತಾರೆ ಅದನ್ನ BJP ಮಾಡುತ್ತೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ರು.

ಉಪಚುನಾವಣೆಯಲ್ಲಿ ೨ ಕ್ಷೇತ್ರಗಳಲ್ಲಿ JDS ಅಲ್ಪಸಂಖ್ಯಾತ ಅಭ್ಯರ್ಥಿಗಳ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿ, JDS ಗೆ ಯಾವಾಗಲೂ ಕಾಂಗ್ರೆಸ್ ಟಾರ್ಗೆಟ್. ಬಸವಕಲ್ಯಾಣದಲ್ಲೂ ಇದೇ ತರ ಮಾಡಿದ್ದಾರೆ, ಹಾನಗಲ್ ಮತ್ತು ಸಿಂದಗಿಯಲ್ಲಿ ಇದೇ ರೀತಿ ಮಾಡಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನ ಹಾಕುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಎಲ್ಲಿ ಕಣಕ್ಕಿಳಿಸಬೇಕೋ ಅಲ್ಲಿ ನಿಲ್ಲಿಸಿಲ್ಲ. ಮಂಡ್ಯ, ಹಾಸನ ಮತ್ತಿತರ ಕಡೆಗಳಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನ ಹಾಕಲಿ. ಇಲ್ಲಿ BJPಗೆ ಸಹಾಯವಾಗಲಿ ಅಂತಾ ಅಲ್ಪಸಂಖ್ಯಾತರನ್ನ ಕಣ್ಣಕ್ಕಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಕೆಂಡ ಕಾರಿದರು.

JDS ಮತ್ತು BJP ಒಳೊಪ್ಪಂದ ಮಾಡಿಕೊಂಡಿದಿಯೋ ಗೊತ್ತಿಲ್ಲ. ಹಳೇ ಮೈಸೂರು ಭಾಗದಲ್ಲಿ ಅಷ್ಟೇ ಅವರ ಪ್ರಾಬಲ್ಯ. ಅಲ್ಲಿ ಕಾಂಗ್ರೆಸ್ ಪಕ್ಷವೂ ಸಹ ಪ್ರಬಲವಾಗಿದೆ. ಹಾಗಾಗಿ ಪದೇ ಪದೇ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದ್ದಾರೆ. ಆದ್ರೆ ಅವರು BJPಯನ್ನ ಟಾರ್ಗೆಟ್ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ರು. ೨ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ.

ದಿನೇ ದಿನೇ ಬೆಲೆ ಏರಿಕೆ ಗಗನಕ್ಕೇರುತ್ತಿವೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಹೊಣೆ. ರಾಜ್ಯ ಸರ್ಕಾರ ಇಲ್ಲಿ ತಮಟೆ ಹೊಡೆದುಕೊಂಡು ಕುಳಿತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನುಡಿದ್ದಿದ್ದಾರೆ. ಇದೇ ವೇಳೆಯಲ್ಲಿ ಸೋನಿಯಾ ಗಾಂಧಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ರಾಜಕಾರಣ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ. ಅಲ್ಲಿ ರಾಷ್ಟ್ರ ರಾಜಕಾರಣದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸೋನಿಯಾ ಗಾಂಧಿ ರಾಷ್ಟ್ರ ರಾಜಕಾರಣಕ್ಕೆ ಕರೆದೂ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆನೂ ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ರು.

error: Content is protected !!