ಕೂಗು ನಿಮ್ಮದು ಧ್ವನಿ ನಮ್ಮದು

ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್ ಐಟಿ ದಾಳಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ

ಮೈಸೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಐಟಿ ದಾಳಿಗೆ ಟಾರ್ಗೆಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರು. ಮುಂದಿನ ಸಿಎಂ ಕೂಗು ಮೈಸೂರಿನಲ್ಲಿ ಮತ್ತೆ ಮೊಳಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು, ಮುಂದಿನ ಸಿಎಂ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಕೂಗಿದ್ದು, ಇದಕ್ಕೆ ವಿಪಕ್ಷ ನಯಕ ಸಿದ್ದರಾಮಯ್ಯ ಅವರು ಫುಲ್ ಖುಷಿಯಿಂದ ಕೈ ಎತ್ತಿ ಬೀಸಿದ್ರು.

ಈ ವೇಳೆ ಸಿದ್ದರಾಮಯ್ಯ ಉಪಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ೨ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದ್ರೆ ಈ ಫಲಿತಾಂಶದಿಂದ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಜನ ಕೇಂದ್ರ ಮತ್ತು ರಾಜ್ಯ ೨ ಸರ್ಕಾರಗಳಿಂದ ಬೇಸತ್ತಿದ್ದಾರೆ.

ಹಾಗಾಗಿ ಕಾಂಗ್ರೆಸ್ ಅನ್ನು ೨ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ. JDS ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದ್ರೆ ಜನ ಬುದ್ಧಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು JDS ನನ್ನು ಟೀಕಿಸಿದ್ರು. ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಅನುಮಾನಿಸಿದ್ರು.

ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ. ಸೋನಿಯಾಗಾಂಧಿ ನನ್ನನ್ನು ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

error: Content is protected !!