ಕೂಗು ನಿಮ್ಮದು ಧ್ವನಿ ನಮ್ಮದು

ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚೀಟ್: ಸಾಹುಕಾರನಿಗೆ ಮಂತ್ರಿಗಿರಿ ಫಿಕ್ಸ್

ಮಾಜಿ ಸಚಿವ, ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ವಿಶೇಷ ತನಿಖಾ ದಳ ‘ಬಿ’ ರಿಪೋರ್ಟ್ ಸಲ್ಲಿಸಿದ್ದು ಈ ಮೂಲಕ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ಸಿಕ್ಕಿದೆ.

ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ. ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಲಾಗಿದೆ.‌ ಇದರಿಂದ ಅತ್ಯಾಚಾರ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನಿನ್ನೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆ ವಿಶೇಷ ತನಿಖಾ ದಳದಿಂದ ತನಿಖಾ‌ ವರದಿ ಸಲ್ಲಿಕೆಯಾಗಿದೆ. ಯುವತಿ ನೀಡಿದ್ದ ದೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖಾಧಿಕಾರಿ ಎಸಿಪಿ ಕವಿತಾ ಅವರಿಂದ ತನಿಖೆ ನಡೆದಿತ್ತು. ಇದರ ನೇತೃತ್ವವನ್ನು ಐಜಿಪಿ ಸೌಮೆಂದು ಮುಖರ್ಜಿ ವಹಿಸಿದ್ದರು. ತನಿಖೆ ಕೈಗೊಂಡಿದ್ದ ವಿಶೇಷ ತನಿಖಾ ದಳ ಒಟ್ಟು 150 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹಲವು ವಿಚಾರಗಳನ್ನು ತಿಳಿಸಿದೆ.

ಕಳೆದ ವರ್ಷ ಸಿಡಿ ಬಹಿರಂಗಗೊಂಡ ಹಿನ್ನೆಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆಯ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆದಲ್ಲಿ ರಮೇಶ್ ಜಾರಕಿಹೊಳಿ ಮತ್ತೆ ಕ್ಯಾಬಿನೆಟ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

error: Content is protected !!