ಕೂಗು ನಿಮ್ಮದು ಧ್ವನಿ ನಮ್ಮದು

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್ನಲ್ಲೂ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುವುದು ಎಂದು ಸೂಚಿಸಿದೆ. ಇದರ ಬೆನ್ನಲ್ಲೇ ಬಿಎಂಟಿಸಿ ಕೂಡ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುತ್ತಿದೆ. ಬಸ್ಗಳಲ್ಲಿ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹು. ಬೇಡಿಕೆಯ ಆಧಾರದ ಮೇಲೆ ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುತ್ತದೆ ಎಂದು ಸಂಸ್ಥೆ ಹೇಳಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗಳನ್ನು ಸಹ ನೀಡಲಾಗುವುದು ಎಂದು ತಿಳಿಸಿದೆ.

ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉಚಿತವಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್ಆರ್ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್​ ಅಂಗಡಿ, ಸೈಬರ್ ಸೆಂಟರ್​ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 31-03-23 ರಿಂದ 15-04-23 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ

error: Content is protected !!