ತಮ್ಮ ಬಹುಮುಖ ಪ್ರತಿಭೆಯ ಮೂಲಕ ಕನ್ನಡ ಚಿತ್ರರಂಗದಲ್ಲಿ ಅಭಿನಯ ಚಕ್ರವರ್ತಿ, ಬಾದಷಾ ಮೊದಲಾದ ಬಿರುದುಗಳನ್ನು ಪಡೆದು ಸದಾ ಕನ್ನಡ ಚಿತ್ರಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತಿರುವ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಗುರುವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಇಬ್ಬರೂ ಸೌಹಾರ್ದಯುತವಾಗಿ ವಿವಿಧ ಪ್ರಸ್ತುತ ವಿಷಯಗಳ ಚರ್ಚೆ ನಡೆಸಿದರು.