ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಪರ ಮತಯಾಚಿಸಲಿದ್ದಾರೆ. ಸುದೀಪ್ ಆಗಮನ ಹಿನ್ನಲೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಮಾಲೂರು ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹಾಗೇ ಮೈಸೂರಿನ ಟಿ ನರಸೀಪುರ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಟಿ ನರಸೀಪುರ ಬಿಜೆಪಿ ಅಭ್ಯರ್ಥಿ ಡಾ ರೇವಣ್ಣ ಪರ ಮಧ್ಯಾಹ್ನ 3.45 ರಿಂದ ಸಂಜೆ 4.45ರವರೆಗೆ ಮತಯಾಚಿಸಲಿದ್ದಾರೆ. ಸಂಜೆ 5.30 ರಿಂದ 6.30ರವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರೋಡ್ ಶೋ ಬಿಜೆಪಿ ಅಭ್ಯರ್ಥಿ ಕವೀಶ್ ಗೌಡ ಪರ ಪ್ರಚಾರ ಮಾಡುತ್ತಾ