ಕೆಲ ದಿನಗಳ ಹಿಂದೆ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದರು. ಬೆದರಿಕೆ ಪತ್ರ ಪ್ರಕರಣ ಸಂಬಂಧ ಲೆಟರ್ ಫೋಸ್ಟ್ ಮಾಡಿದ ಪೋಸ್ಟ್ ಆಫೀಸ್ ಪತ್ತೆಯಾದ ಬೆನ್ನಲೇ ಇದೀಗ ಮತ್ತೊಂದು ಸುಳಿವು ಸಿಕ್ಕಿದೆ.
ಕೆಲ ದಿನಗಳ ಹಿಂದೆ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದರು. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿತ್ತು. ಸ್ಯಾಂಡಲ್ ವುಡ್ ನಟ ಸುದೀಪ್ ಗೆ ಬಂದ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಚುರುಕಾಗಿದೆ.
ಈಗಾಗಲೇ ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜಕೀಯ ಹಾಗೂ ಸಿನಿಮಾರಂಗ ಎರಡೂ ಆಯಾಮದಲ್ಲೂ ತನಿಖೆ ಬಿಗಿ ಗೊಳಿಸಿದ್ದಾರೆ. ಈ ನಡುವೆ ಸಿನಿಮಾರಂಗದ ಕೆಲ ವಿರೋಧಿಗಳ ಜೊತೆ ಸೇರಿ ವ್ಯಕ್ತಿಯೋರ್ವ ಈ ಕೃತ್ಯ ನಡೆಸಿರಬಹುದು ಎನ್ನುವ ಸಂದೇಹ ವ್ಯಕ್ತವಾಗಿದೆ. ಇದರ ಬೆನ್ನಲೇ ಕಿಚ್ಚನಿಗೆ ಬೆದರಿಕೆ ಪತ್ರ ಪ್ರಕರಣದ ಹಿನ್ನಲೆ ಲೆಟರ್ ದೊಮ್ಮಲೂರಿನ ಪೋಸ್ಟ್ ಆಫೀಸ್ನಿಂದ ಮಾಡಲಾದ ಬೆದರಿಕೆ ಪತ್ರಗಳು ಎಂದು ತಿಳಿದು ಬಂದಿದೆ.