ಬೆಂಗಳೂರು: ಎವರ್ ಗ್ರೀನ್ ಸ್ಯಾಂಡಲ್‍ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಟಿ ಸುಧಾರಾಣಿಯವರು ತಮ್ಮ ಖುಷಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರೊಂದಿಗೆ ಖುಷಿಯ ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ.
ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದ ನನಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಿದ್ದಾರೆ ಎಂದು ಬರೆದುಕೊಂಡು ಡಾಕ್ಟರೇಟ್ ಸ್ವೀಕರಿಸುತ್ತಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಅವರು ಚೈಲ್ಡವುಡ್ ಆರ್ಟಿಸ್ಟ್ ಆಗಿ ತಮ್ಮ ನಟನೆಯನ್ನು ಪ್ರಾರಂಭಿಸಿದ್ರು.
ಬಳಿಕ ಹಲವಾರು ಜಾಹಿರಾತುಗಳಲ್ಲಿ ನಟಿ ಸುಧಾರಾಣಿಯವರು ಕಾಣಿಸಿಕೊಂಡಿದ್ರು. ತಮ್ಮ ೧೨ನೇ ವಯಸ್ಸಿನಲ್ಲಿ ನಟ ಶಿವರಾಜ್‍ಕುಮಾರ್ ಅವರ ಮೊದಲ ಸಿನಿಮಾ ಆನಂದ್‍ಗೆ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ನಾಯಕಿ ನಟಿಯಾಗಿ ಎಂಟ್ರಿ ಕೊಟ್ರು. ಇವರು ನಟಿಸಿದ ಚಿತ್ರಗಳೆಲ್ಲವು ಸೂಪರ್ ಹಿಟ್ ಆಗುತ್ತಿದ್ದವು. ಇವರು ಸಿನಿಮಾ ರಂಗಕ್ಕೆ ಕಾಲಿಟ್ಟು ೩೫ ವರ್ಷ ಕಳೆದಿದ್ದರೂ, ಇಂದಿಗೂ ಸಹ ಅಷ್ಟೇ ಬೇಡಿಕೆಯನ್ನು ನಟಿ ಸುಧಾರಾಣಿಯವರು ಉಳಿಸಿಕೊಂಡಿದ್ದಾರೆ.
ಕನ್ನಡ ಸಿನಿಪ್ರಿಯರ ನೆಚ್ಚಿನ ಎವರ್ ಗ್ರೀನ್ ನಟಿ ಸುಧಾರಾಣಿ. ಸೋಷಿಯಲ್ ಮೀಡಿಯಾದಲ್ಲಿ ಈಗ ಸಖತ್ ಆಕ್ಟಿವ್ ಆಗಿದ್ದಾರೆ. ಇದೀಗ ಅವರಿಗೆ ಗೌರವ ಡಾಕ್ಟರೇಟ್ ಬಂದಿರುವ ಕುರಿತಾಗಿ ಸಂತಸವನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆಯನ್ನು ಸೂಚಿಸಿ ಕಾಮೆಂಟ್ ಮಾಡುತ್ತಿದ್ದಾರೆ.