ಕೂಗು ನಿಮ್ಮದು ಧ್ವನಿ ನಮ್ಮದು

ಮಂಡ್ಯ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚಿಸಿದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್ ಹಾಗೂ ಸಚಿವ ನಾರಾಯಣ ಸ್ವಾಮಿ ಇವತ್ತು ಆರ್. ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ರು.

ಮೈ ಶುಗರ್ ಕಾರ್ಖಾನೆ ಆದಷ್ಟು ಬೇಗ ಶುರು ಮಾಡುವುದು, ಜಿಲ್ಲೆಯ ನೀರಾವರಿ ಯೋಜನೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು, ಅಕ್ರಮ ಗಣಿಗಾರಿಕೆ ತಡೆ ಮತ್ತು ಕೆ.ಆರ್.ಎಸ್ ಸುತ್ತ ಮುತ್ತಲಿನ ಗಣಿಗಾರಿಕೆ ನಿಯಂತ್ರಣ, ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚೆ ನಡೆಸಲಾಯಿತು.

error: Content is protected !!