ಟೀಮ್ ಇಂಡಿಯಾ ಕಂಡಂತಹ ಅತ್ಯುತ್ತಮ ಫೀಲ್ಡರ್ಗಳಲ್ಲಿ ಒಬ್ಬರಾಗಿರುವ ಸುರೇಶ್ ರೈನಾ ತಮ್ಮ 35ನೇ ವಯಸ್ಸಿನಲ್ಲೂ ಪರಾಕ್ರಮ ತೋರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಇಂಡಿಯಾ ಲೆಜೆಂಡ್ಸ್ ಮತ್ತು ಆಸ್ಟ್ರೇಲಿಯಾ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅದ್ಭುತ ಕ್ಯಾಚ್ ಹಿಡಿದು ಮಿಂಚಿದರು.
ಅಭಿಮನ್ಯು ಮಿಥುನ್ ಎಸೆದ 16ನೇ ಓವರ್ನಲ್ಲಿ ಆಸ್ಟ್ರೇಲಿಯಾ ಲೆಜೆಂಡ್ಸ್ನ ಬೆನ್ ಡಂಕ್ ಬ್ಯಾಕ್ವರ್ಡ್ ಪಾಯಿಂಟ್ ಮೂಲಕ ಭರ್ಜರಿ ಶಾಟ್ ಬಾರಿಸಲು ಪ್ರಯತ್ನಿಸಿದರು. ಆದರೆ ಅಲ್ಲದೆ ಫೀಲ್ಡಿಂಗ್ನಲ್ಲಿದ್ದ ರೈನಾ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಇತ್ತ ಸುರೇಶ್ ರೈನಾ ಅವರ ಈ ಸೂಪರ್ಮ್ಯಾನ್ ಕ್ಯಾಚ್ ನೋಡಿ ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಸೂಪರ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸೂಪರ್ ಮ್ಯಾನ್ ರೈನಾ ಸಾಹಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ 17 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನುಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈ ಪಂದ್ಯವನ್ನು ಗುರುವಾರಕ್ಕೆ ಮುಂದೂಡಲಾಗಿದ್ದು, ಅದರಂತೆ ಉಳಿದ ಓವರ್ಗಳನ್ನು ಸೆಪ್ಟೆಂಬರ್ 29 ರಂದು ಆಡಲಾಗುತ್ತದೆ.