ಕೂಗು ನಿಮ್ಮದು ಧ್ವನಿ ನಮ್ಮದು

ಇಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ! ಇಂದೇ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ ಸಾಧ್ಯತೆ?

ಬೆಂಗಳೂರು; ಕೊರೋನಾದಿಂದ ಕಳೆದ ವರ್ಷದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದರಿಂದ ಆನ್ಲೈನ್ ಕ್ಲಾಸ್ ಮೂಲಕ ವಿದ್ಯಾರ್ಥಿಗಳಿಗೆ ಅಕ್ಷರ ಅಭ್ಯಾಸ ಮಾಡಿಸಲಾಗುತ್ತಿದೆ. ಇನ್ನೊಂದಡೆ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಶಾಲಾ- ಕಾಲೇಜುಗಳ ಆರಂಭ ಮತ್ತು SSLC ಪರೀಕ್ಷೆಯ ವೇಳಾಪಟ್ಟಿ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ಇಂದು ಎಸ್ ಎಸ್ ಎಲ್‌ಸಿ‌ ಪರೀಕ್ಷೆ ದಿನಾಂಕ ಪ್ರಕಟ ಮಾಡಲಿದ್ದೇವೆ. ಪರೀಕ್ಷೆ ವಿಚಾರವಾಗಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಘೋಷಣೆ ಮಾಡಲಾಗುವುದು. ಶಾಲೆ ಆರಂಭ ಹಾಗೂ ಪರೀಕ್ಷೆ ಪೂರ್ವ ತಯಾರಿ ಕುರಿತು ವಿಕಾಸಸೌಧದಲ್ಲಿಂದು ಸಭೆ ನಡೆಯಲಿದೆ. ರಾಜ್ಯದ ಜಿಲ್ಲಾಧಿಕಾರಿ, ಸಿಇಓ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಇದೆ. ಸಭೆ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಶಾಲೆ ಆರಂಭ ಕುರಿತು ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಶಾಲೆ- ಕಾಲೇಜುಗಳನ್ನು ಓಪನ್ ಮಾಡಲು (Schools and Colleges Reopen) ಕೌಂಟ್ ಡೌನ್ ಶುರುವಾಗಿದೆ. ರಾಜ್ಯದಲ್ಲಿ ಶಾಲಾ ಕಾಲೇಜು ತೆರೆಯುವ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಶಾಲಾ ಕಾಲೇಜು ತೆರೆಯುವ ಕುರಿತು ಸಚಿವ ಸುರೇಶ್ ಕುಮಾರ್ ನಿರ್ಧಾರ ಕೈಗೊಳ್ಳುತ್ತಾರಾ? ಎಂಬ ಕುತೂಹಲ ಉಂಟಾಗಿದೆ. ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಚಿವ ಸುರೇಶ್ ಕುಮಾರ್ ವಿಡಿಯೋ ಕಾನ್ಪೆರೆನ್ಸ್ ನಡೆಸಲಿದ್ದಾರೆ.

error: Content is protected !!