5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಯಾರೂ ಅನಗತ್ಯ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಬಣದ ಸಚಿವರು, ಶಾಸಕರಿಗೆ ಸುರ್ಜೇವಾಲ ಸೂಚನೆ ನೀಡಿದ್ದಾರೆ.
ಸಿಎಂ, ಡಿಸಿಎಂ ಬಗ್ಗೆ 4 ಗೋಡೆಯ ಮಧ್ಯೆ ಮಾತುಕತೆ ನಡೆದಿರುವುದು ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆಯನ್ನು ನೀಡಬೇಡಿ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ನಿರ್ಧರಿಸುತ್ತಾರೆ ಎಂದಿದ್ದಾರೆ