ಚಾಮರಾಜನಗರ: ಯುಗಾದಿ ಹಬ್ಬದಂದೇ ಪ್ರೇಮಿಯೋರ್ವನ ಕೊಲೆಯಾಗಿದೆ. ಹುಡುಗಿಯನ್ನು ಪ್ರೀತಿಸುತ್ತಿದ್ದ ಹುಡುಗನಿಗೆ ಯುಗಾದಿ ಹಬ್ಬವೇ ಸೂತಕದ ದಿನವಾಗಿದೆ.
ಗಲ್೯ ಫ್ರೆಂಡ್ ಮನೆಯವರಿಂದಲೇ ಈ ಕೊಲೆಯಾಗಿದೆ ಎನ್ನಲಾಗುತ್ತಿದ್ದು, ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ಹೊಸೂರು ಬಡಾವಣೆಯಲ್ಲಿ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಕೊಲೆಯಾದ ಯುವಕನನ್ನು ಹೊಸೂರು ಬಡಾವಣೆಯ ಚಿಕ್ಕರಾಜು (30) ಎಂದು ಗುರುತಿಸಲಾಗಿದೆ.
ಅದೇ ಬಡಾವಣೆಯಲ್ಲಿ ವಾಸವಿದ್ದ ಯುವತಿಯ ಕಡೆಯವರಿಂದ ಈ ಕುಕೃತ್ಯ ನಡೆದಿದೆ ಎನ್ನಲಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿಗಳು ಪರಾರಿಯಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.