ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಮಾಡಿದ್ದು, ಸುತ್ತೋಲೆಯನ್ನು ಜಾರಿಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಲಾಗಿದೆ.
ಮಾರ್ಚ್ 28 ರಿಂದ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೂ ಎಸ್.ರಸ್.ಎಲ್.ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಿಜಾಬ್ ಧರಿಸಿಕೊಂಡು ಬಾರದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿಜಾಬ್ ಧರಿಸಿಕೊಂಡು ಪರೀಕ್ಷೆಗೆ ಬಂದರೆ, ಅವಕಾಶ ನೀಡಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 1995ರ ನಿಯಮ 11ರಲ್ಲಿ ಇರುವ ಅಧಿಕಾರದನ್ವಯ ಸಮವಸ್ತ್ರ ಜಾರಿಮಾಡಲಾಗಿದೆ.
ಇನ್ನು ರಾಜ್ಯದಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಸಂಖ್ಯೆ ಈ ಕೆಳಗಿನಂತಿದೆ.
ಹೊಸದಾಗಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು: 8,20,888
ಖಾಸಗಿ ವಿದ್ಯಾರ್ಥಿಗಳು: 46,200
ಗಂಡು ಮಕ್ಕಳು: 4,52,732
ಹೆಣ್ಣು ಮಕ್ಕಳು: 4,21,110
ತೃತೀಯ ಲಿಂಗಿಗಳು: 04
ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು: 5,307
ಪರೀಕ್ಷೆಗೆ ನೋಂದಾಯಿತ ಒಟ್ಟು ಶಾಲೆಗಳ ಸಂಖ್ಯೆ: 15,387
ಸರ್ಕಾರಿ: 5,717
ಅನುದಾನಿತ: 3,412
ಅನುದಾನ ರಹಿತ: 6,258
ಪರೀಕ್ಷಾ ಕೇಂದ್ರಗಳ ಒಟ್ಟು ಸಂಖ್ಯೆ 3,444
ಸರ್ಕಾರಿ: 1357
ಅನುದಾನಿತ: 1009
ಅನುದಾನಿತ ರಹಿತ: 978
ಸಾಮಾನ್ಯ ಕೇಂದ್ರಗಳು: 3,275
ಖಾಸಗಿ ಕೇಂದ್ರಗಳು: 169
ರಾಜ್ಯದಲ್ಲಿ ಪರೀಕ್ಷೆಗಾಗಿ 45,289 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ.
3,444 ಮುಖ್ಯ ಅಧಿಕ್ಷಕರಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ.
49,817 ಕೊಠಡಿ ಮೇಲ್ವಿಚಾರಕರು ಎಸ್.ಎಸ್.ಎಲ್.ಸಿ ಪರೀಕ್ಷೆಯ ನೇತೃತ್ವ ವಹಿಸಲಿದ್ದಾರೆ.