ವಿಜಯನಗರ: ಟೈಯರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ಸೊಂದು ಧಗ- ಧಗನೇ ಹೊತ್ತಿ ಉರಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ರಾ.ಹೆ. 50 ರ ಬಳಿ ಘಟನೆ ನಡೆದಿದ್ದು, ಅದೃಷ್ಟ ವಷಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗಿನ ಜಾವ ಖಾಸಗಿ ಬಸ್ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತುಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದ ಮೂವತ್ತು ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗೆ ಇಳಿಸಲಾಗಿದೆ. ಇದರಿಂದ ಯಾವುದೇ ಅವಘಡ ಸಂಬವಿಸಿಲ್ಲ.
ಬೆಂಗಳೂರಿನಿಂದ ಹಟ್ಟಿ ಚಿನ್ನದಗಣಿಯ ಕಡೆ ಹೊರಟಿದ್ದ ಖಾಸಗಿ ಬಸ್ ಬೆಳಗಿನ ಜಾವ ಬೆಂಕಿ ಅವಘಡಕ್ಕೆ ತುತ್ತಾದ್ರೆ ಇತ್ತ ಪ್ರಯಾಣಿಕರು ಬದುಕಿತು ಬಡ ಜೀವ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಕಾನಾಹೊಸಳ್ಳಿ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಅಗ್ನಿಶಾಮಕ ದಳದ ಎರಡು ಫೈರ್ ಎಂಜಿನ್ ಗಳ ಮೂಲಕ ಬೆಂಕಿ ನಂದಿಸಲಾಗಿದೆ. ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.