ಕೂಗು ನಿಮ್ಮದು ಧ್ವನಿ ನಮ್ಮದು

ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ,ಇಬ್ರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಇಲ್ಲಿನ ಬುಡರಸಿಂಗಿ ಕ್ರಾಸ್‌ ಹತ್ತಿರ ನಿಂತಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಕಲ್ಮೇಶ ಯಂಕಮ್ಮನವರ (೨೬) ಮತ್ತು ಹಾವೇರಿ ಜಿಲ್ಲೆಯ ಕಲ್ಮೇಶ ಜಾಧವ (೨೬) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತನನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ಗಾಡಿಯನ್ನು ನಿಲ್ಲಿಸಿದ್ರು. ಇದೆ ಸಮಯದಲ್ಲಿ ಮಹಾರಾಷ್ಟ್ರದ ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್ ಚಲಾಯಿಸಿಕೊಂಡು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ. ಟ್ಯಾಂಕರ್ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿಯಲ್ಲಿ ನಿಂತಿರುವ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಸಿದ್ದ ಪರಿಣಾಮವಾಗಿ ಟ್ರ್ಯಾಕ್ಟರ್ ಹಿಂದಿದ್ದ ಇಬ್ರು ಸಾವನ್ನಪ್ಪಿದ್ದಾರೆ. ಜೊತೆಗೆ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!