ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೃದ್ಧೆ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಹಾಗೂ ಕ್ಯಾತ್ಸಂದ್ರ ಮಧ್ಯೆ ರೈಲ್ವೆ ಹಳಿ ಮೇಲೆ ಅಪರಿಚಿತ ವೃದ್ಧೆ ಸಿಲುಕಿ ಮೃತಳಾಗಿದ್ದಾಳೆ. ಸುಮಾರು 50 ವರ್ಷದ ವೃದ್ಧೆ ಮಹಿಳೆ ಎನ್ನಲಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ.
ಕೌಟುಂಬಿಕ ಕಲಹದಿಂದ ತಾನೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಊಹಿಸಲಾಗಿದೆ. ಸ್ಥಳಕ್ಕೆ ತುಮಕೂರು ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ಅಪರಿಚಿತ ವೃದ್ಧೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಮೃತರಾದರೋ ಅಂತಾ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.