ಕೂಗು ನಿಮ್ಮದು ಧ್ವನಿ ನಮ್ಮದು

ಉಮೇಶ್ ಕತ್ತಿ ಸಮಾಧಿ ಸ್ಥಳದಲ್ಲಿ ಅಗೆದಷ್ಟು ಉಕ್ಕುತ್ತಿರುವ ನೀರು

ಬೆಳಗಾವಿ: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ವಿಧವಶರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿರುವ ಉಮೇಶ್ ಕತ್ತಿ ಅವರ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ನಡೆಯಲಿದೆ. ಈಗಾಗಲೇ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಉಮೇಶ್ ಕತ್ತಿ ಅವರ ಸಮಾಧಿ ಸ್ಥಳದಲ್ಲಿ ಅಗೆದಷ್ಟು ನೀರು ಉಕ್ಕುತ್ತಿದೆ. ಎಳು ಅಡಿ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದು, ನೀರು ಹೊರಹಾಕಲು ಅಭಿಮಾನಿಗಳು ಹರಸಾಹಸ ಪಡುತ್ತಿದ್ದಾರೆ.

ಇನ್ನು ಉಮೇಶ್ ಕತ್ತಿ ಅವರ ಅಂತಿಮ ದರ್ಶನಕ್ಕೆ ಭಾರೀ ಪ್ರಮಾಣದಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ವಿಶ್ವನಾಥ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ನಡೆಸಲಾಗಿದೆ.

error: Content is protected !!