ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನ್ಲಾಕ್ 3.0 ಮಾರ್ಗಸೂಚಿಯನ್ನು ಇಂದು (ಜುಲೈ 3) ಬಿಡುಗಡೆಗೊಳಿಸಿದ್ದಾರೆ. ದಿನಾಂಕ: 05/07/2021 ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19/07/2021 ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ರಾಜ್ಯದಲ್ಲಿ ಜಾರಿಯಲ್ಲಿರುವ ಸಡಿಲಿಕೆಗಳು ಹಾಗೂ ನಿರ್ಬಂಧಗಳು
- ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
- ಮೆಟ್ರೋ ಸೇಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
- ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
- ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
- ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
- ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
- ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
- ಪಬ್‌ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ. ಹೋಟೆಲ್, ಬಾರ್‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
ಈ ಕಾರಣದಿಂದಾಗಿ ಮೈಸೂರು ಸೇರಿದಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಇಂದು ಅಥವಾ ನಾಳೆ ನೀಡುವ ಆದೇಶದಂತೆ ಆಯಾ ಜಿಲ್ಲೆಯಲ್ಲಿ ನಿಯಮಗಳು ಜಾರಿಯಾಗಲಿವೆ.