ಕೂಗು ನಿಮ್ಮದು ಧ್ವನಿ ನಮ್ಮದು

ಪತ್ನಿಗೆ ಜಿಪಿಎ ಅಧಿಕಾರ ಪತ್ರ ನೀಡಲು ಪೊಲೀಸ್ ಭದ್ರತೆಯ ನಡುವೆ ಧಾರವಾಡಕ್ಕೆ ಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ: ಯೋಗೇಶ್ ಗೌಡ ಹತ್ಯೆ ಕೇಸ್ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಧಾರವಾಡಕ್ಕೆ ಆಗಮಿಸಿದ್ದಾರೆ. ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ವಿನಯ್ ಕುಲಕರ್ಣಿ, ತನ್ನ ಪತ್ನಿ ಶಿವಲೀಲಾ ಅವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ನೀಡಲು ಧಾರವಾಡಕ್ಕೆ ಬಂದಿದ್ದಾರೆ.

ವಿನಯ್ ಕೋರಿಕೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆ ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ ಪೊಲೀಸ್ ಭದ್ರತೆಯ ನಡುವೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಕಚೇರಿಗೆ ಇಂದು ಆಗಮಿಸಿದ್ದಾರೆ. ಇನ್ನು ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.

error: Content is protected !!