ಕೂಗು ನಿಮ್ಮದು ಧ್ವನಿ ನಮ್ಮದು

ಲಿಂಗಸಗೂರಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ರಾಯಚೂರು: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ ಬಿಜೆಪಿ ಪಕ್ಷದ ಬಾವುಟ ಇರುವ ಕಾರಿನಲ್ಲಿ ‌ಮತಗಟ್ಟೆಗೆ ಆಗಮಿಸಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬಿಜೆಪಿ, ಕಾಂಗ್ರೆಸ್ ಮುಖಂಡರ ನಡುವೆ ‌ಮಾತಿನ ಚಕಮಕಿ ನಡೆದಿದೆ. ಕೂಡಲೇ ಮಧ್ಯೆ ಪ್ರವೇಶಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

error: Content is protected !!