ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಜಿಲ್ಲೆಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಜಾರಿಯಾಗಿದೆ. ಇಂದಿನಿಂದ ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಸಹ ರದ್ದು ಮಾಡಲಾಗದ್ದು, ಹಾಲು, ಔಷಧಿ, ಆಸ್ಪತ್ರೆಗೆ ಹೋಗಲು ಮಾತ್ರ ಅವಕಾಶ ನೀಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಬೆಳಗಾವಿ ಚೆನ್ನಮ್ಮ ವೃತ್ತ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದು, ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಜಿಲ್ಲೆಯಲ್ಲಿ ಸದ್ಯ ಎಂಟು ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವ್ ರೇಟ್ ಶೇ.5 ಕ್ಕಿಂತಲೂ ಹೆಚ್ಚಾಗಿರುವ ಕಾರಣ ಜಿಲ್ಲೆಯಾದ್ಯಂತ ಜೂನ್ 21ರ ವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ.