ಕೂಗು ನಿಮ್ಮದು ಧ್ವನಿ ನಮ್ಮದು

ಬೆಂಗಳೂರಿನಲ್ಲಿ ಈ ವಾರವಿಡೀ ಚಳಿ, ಮಂಜಿನ ವಾತಾವರಣ; ಮಲೆನಾಡಿನಲ್ಲಿ ಶೀತ ಗಾಳಿ

ಬೆಂಗಳೂರು: ಭಾರತದ ಐಟಿ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ ದಟ್ಟವಾದ ಮಂಜು ಆವರಿಸಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಚಳಿ ಮತ್ತು ಮಂಜು ಆವರಿಸಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ. ಶೀತ ಹವಾಮಾನದಿಂದ ಜನರ ಆರೋಗ್ಯ ಸ್ಥಿತಿಯೂ ಹದಗೆಟ್ಟಿದ್ದು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ.


[18/01, 6:59 am] Om Sai Ram🙏: ಬೆಂಗಳೂರಿನಲ್ಲಿ ಇಂದು (ಬುಧವಾರ) ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ವಾರಾಂತ್ಯದ ವೇಳೆಗೆ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ಗೆ ಏರಲಿದೆ ಎಂದು IMD ಭವಿಷ್ಯ ನುಡಿದಿದೆ. ಆದರೆ ಮಂಜು ಕಡಿಮೆಯಾಗುವ ಸಾಧ್ಯತೆಯಿಲ್ಲ. ಕರ್ನಾಟಕದ ಒಳನಾಡಿನ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಇಂದು ಸಾಮಾನ್ಯಕ್ಕಿಂತ 4 – 5 ಡಿಗ್ರಿ ಸೆಲ್ಸಿಯಸ್ಗಳಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಬಾಗಲಕೋಟೆಯಲ್ಲಿ ಸೋಮವಾರ ಕನಿಷ್ಠ ತಾಪಮಾನ 8.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಈ ವಾರವಿಡೀ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಜ. 20ರವರೆಗೂ ಮಲೆನಾಡು, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ತೀವ್ರ ಚಳಿ ಮತ್ತು ದಟ್ಟ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಕಳೆದ 4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಗುರುವಾರದಿಂದ ಸಿಲಿಕಾನ್ ಸಿಟಿಯಲ್ಲಿ ಕನಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿಯ ಜೊತೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ 9ರಿಂದ 13 ಡಿಗ್ರಿ ಸೆಲ್ಸಿಯಸ್ ಇದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಭಾಗದಲ್ಲಿ ಶೀತ ಗಾಳಿ ಶುರುವಾಗಿದೆ.

ಭಾರತದ ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಶೀತ ಅಲೆ ಹೆಚ್ಚಾಗಿದೆ. ಇಲ್ಲಿನ ಅನೇಕ ನಗರಗಳಲ್ಲಿ ಕನಿಷ್ಠ ತಾಪಮಾನ 3ರಿಂದ 5 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ವಾರವಿಡೀ ಚಳಿ ಹೆಚ್ಚಾಗುವ ನಿರೀಕ್ಷೆಯಿದೆ. ಇಂದು ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಬೀಳಬಹುದು. ಸಿಕ್ಕಿಂನಲ್ಲಿ ಹಿಮಪಾತವಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಕೂಡ ಮಳೆಯಾಗಬಹುದು. ಬಿಹಾರ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ರಾಜಸ್ಥಾನ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೀತ ಅಲೆಗಳ ಪರಿಸ್ಥಿತಿಯನ್ನು ನಿರೀಕ್ಷಿಸಲಾಗಿದೆ.

error: Content is protected !!