ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಶ್ರೀರಾಮ್ ಕಾಲೋನಿ ಲಕ್ಷ್ಮೀ ನಗರದಲ್ಲಿ ನೂತನ ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿಗಳ ಕಾಲಂ ಪೂಜೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನೆರವೇರಿಸಿದರು.
ವಿಧಾನ ಸಭಾ ಸದಸ್ಯರ ಹಾಗೂ ವಿಧಾನ ಪರಿಷತ್ ಸದಸ್ಯರ ಶಾಸಕರ ನಿಧಿಯಿಂದ 10 ಲಕ್ಷ ರೂ,ಗಳ ವೆಚ್ಚದಲ್ಲಿ ಈ ಮಂದಿರ ನಿರ್ಮಾಣಗೊಳ್ಳುತ್ತಿದೆ. ಕಟ್ಟಡವನ್ನು ಸುಂದರವಾಗಿ ಮತ್ತು ಆದಷ್ಟು ಬೇಗ ಗುಣಮಟ್ಟದೊಂದಿಗೆ ನಿರ್ಮಾಣ ಮಾಡುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಮನೋಹರ ಬೆಳಗಾಂವ್ಕರ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.