ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಗೋವಿಂದ ಕಾರಜೋಳ, ಆರ್. ಅಶೋಕ್ ಮತ್ತು ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.,.
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದ್ದು, ಲಿಂಗಾಯಿತ ಸಿಎಂ ಆಗಿರುವುದರಿಂದ ಒಕ್ಕಲಿಗರು, ದಲಿತರು ಮತ್ತು ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಘೋಷಣೆ ಮಾಡಲಾಗಿದೆ. ಗೋವಿಂದ ಕಾರಜೋಳ, R ಅಶೋಕ್, ಬಿ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.